Close Menu
Cini ShodhaCini Shodha

    Subscribe to Updates

    Get the latest creative news from FooBar about art, design and business.

    What's Hot

    Nishvika Naidu: ಮಾರ್ಕ್ ಮೂಲಕ ಖುಲಾಯಿಸಿತಾ ಅದೃಷ್ಟ?

    rajinikanth movie: ಮಹಿಳಾ ನಿರ್ದೇಶಕಿಯ ಕಥೆಗೆ ರಜನಿ ಒಪ್ಪಿಗೆ?

    Pyaar Kannada #1 Movie: ಪ್ರೇಮಕಥನಕ್ಕೆ ಕನಸುಗಾರನ ಸಾಥ್!

    Facebook X (Twitter) Instagram
    Cini ShodhaCini Shodha
    • ಮುಖಪುಟ
    • ಸ್ಪಾಟ್ ಲೈಟ್
    • ಟೇಕಾಫ್
    • ಜಾಪಾಳ್ ಜಂಕ್ಷನ್
    • ಎಡಿಟೋರಿಯಲ್
    • ಬಣ್ಣದ ಹೆಜ್ಜೆ
    • ಕಿರುತೆರೆ ಕಿಟಕಿ
    • ಹೀಗಿದೆ ಈ ಪಿಚ್ಚರ್
    • ಕಲರ್ ಜೋನ್
      • ಬಾಲಿವುಡ್
      • ಹಾಲಿವುಡ್
      • ಸೌತ್ ಜೋನ್
    • OTT
    Facebook X (Twitter) Instagram
    Cini ShodhaCini Shodha
    You are at:Home»ಬಣ್ಣದ ಹೆಜ್ಜೆ»ello jogappa ninnaramane: ಎಲ್ಲೋ ಜೋಗಪ್ಪ ನಿನ್ನರಮನೆ ನಾಯಕ ಅಂಜನ್ ಅಂತರಾಳ!
    ಬಣ್ಣದ ಹೆಜ್ಜೆ

    ello jogappa ninnaramane: ಎಲ್ಲೋ ಜೋಗಪ್ಪ ನಿನ್ನರಮನೆ ನಾಯಕ ಅಂಜನ್ ಅಂತರಾಳ!

    By Santhosh Bagilagadde20/02/2025
    Facebook Twitter Telegram Email WhatsApp
    73962318 adce 4c85 8928 7a1edd71f19a
    Share
    Facebook Twitter LinkedIn WhatsApp Email Telegram

    ಈ ವರ್ಷದ ಆರಂಭದಲ್ಲಿಯೇ ಸಿನಿಮಾ ಪ್ರೇಮಿಗಳ ಪಾಲಿಗೆ ಸುಗ್ಗಿಯಾಗಬಹುದಾದ ವಾತಾವರಣವೊಂದು ಕಣ್ಣಡ ಚಿತ್ರರಂಗವನ್ನು ವ್ಯಾಪಿಸಿಕೊಂಡಿದೆ. ಯಾಕೆಂದರೆ, ಒಂದಕ್ಕೊಂದು ಭಿನ್ನವಾದ, ಹೊಸತನ ಹೊದ್ದುಕೊಂಡಿರುವಂಥಾ ಒಂದಷ್ಟು ಸಿನಿಮಾಗಳು ಬಿಡುಗಡೆಯ ಸರತಿಯಲ್ಲಿವೆ. ಆ ಯಾದಿಯಲ್ಲಿ ಮುಂಚೂಣಿಯಲ್ಲಿರುವ ಹಯವದನ ನಿರ್ದೇಶನದ `ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರ ಈ ವಾರ ಅಂದರೆ, ಫೆಬ್ರವರಿ ೨೧ರಂದು ರಾಜ್ಯಾದ್ಯಂತ ತೆರೆಗಾಣುತ್ತಿದೆ. ಈ ಮೂಲಕ ಅಂಜನ್ ನಾಗೇಂದ್ರ ನಾನಾ ಶೇಡುಗಳಿರುವ ಗಟ್ಟಿ ಪಾತ್ರವಾಗಿ ಪ್ರೇಕ್ಷಕರನ್ನು ಮುಖಾಮುಖಿಯಾಗಲು ಅಣಿಗೊಂಡಿದ್ದಾರೆ. ಈ ಪಾತ್ರದ ಚಹರೆ, ಅದು ತನಗೊಲಿದ ಬಗೆ ಹಾಗೂ ಒಂದಿಡೀ ಸಿನಿಮಾ ತನ್ನೊಳಗೆ ಮೂಡಿಸಿರುವ ಭರವಸೆಯ ಬಗ್ಗೆ ಖುದ್ದು ಅಂಜನ್ ನಾಗೇಂದ್ರ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

    628A5162ಈ ಹಿಂದೆ ಕಂಬ್ಳಿ ಹುಳ ಚಿತ್ರದ ಮೂಲಕ ನಾಯಕನಾಗಿ ಎಂಟ್ರಿ ಕೊಟ್ಟಿದ್ದವರು ಅಂಜನ್. ಮೊದಲ ಹೆಜ್ಜೆಯಲ್ಲಿಯೇ ಅವರ ನಟನೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಆ ಸಿನಿಮಾದ ಭೂಮಿಕೆಯಲ್ಲಿಯೇ `ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ನಾಯಕನಾಗೋ ಅವಕಾಶ ಅವರ ಪಾಲಿಗೆ ಒಲಿದದ್ದು ನಿಜಕ್ಕೂ ಅಚ್ಚರಿಯ ಸಂಗತಿ. ಎಳವೆಯಿಂದಲೇ ರಂಗಭೂಮಿಯ ನಂಟು ಹೊಂದಿದ್ದ ಅಂಜನ್ ಪಾಲಿಗೆ ನಟನಾಗಿ ಯಾವ ದಿಕ್ಕಿನತ್ತ ಸಾಗಬೇಕು, ಯಾವ ಬಗೆಯ ಕಥೆಯನ್ನು ಆಯ್ಕೆ ಮಾಡಿಕೊಳ್ಳಬೇಕೆಂಬ ಬಗ್ಗೆ ಸ್ಪಷ್ಟವಾದ ಅಂದಾಜಿದೆ. ಕಂಬ್ಳಿ ಹುಳ ಚಿತ್ರದ ನಂತರ ಭಿನ್ನವಾದ ಪಾತ್ರದಲ್ಲಿ ನಟಿಸಬೇಕೆಂಬುದು ಅಂಜನ್ ಆಸೆಯಾಗಿತ್ತು. ಅದು ಕಂಬ್ಳಿಹುಳ ಚಿತ್ರ ಬಿಡುಗಡೆಗೆ ಮುನ್ನವೇ ಸಾಕಾರಗೊಂಡು ಸ್ವತಃ ಅಂಜನ್ ರನ್ನೇ ಅಚ್ಚರಿಗೀಡು ಮಾಡಿತ್ತು.

    Snapinst.app 445262583 994277148670686 7897184235172099749 n 1080 ಇಂಥಾದ್ದೊಂದು ಮಿರ್‍ಯಾಕಲ್ ಸಂಭವಿಸಿದ್ದು ಕಂಬ್ಳಿಹುಳ ಚಿತ್ರದ ಪ್ರೀಮಿಯರ್ ಶೋ ಭೂಮಿಕೆಯಲ್ಲಿ. ಈ ಪ್ರೀಮಿಯರ್ ಶೋಗೆ ನಿರ್ದೇಶಕ ಹಯವದನ ಕೂಡಾ ಆಗಮಿಸಿದ್ದರು. ಸಿನಿಮಾ ನೋಡುತ್ತಲೇ ಹಯವದನ ಅದಾಗಲೇ ರೆಡಿ ಮಾಡಿಟ್ಟುಕೊಂಡಿದ್ದ `ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರಕ್ಕೆ ನಾಯಕನಾಗಲು ಅಂಜನ್ ನಾಗೇಂದ್ರ ಸೂಕ್ತ ಎಂಬಂಥಾ ತೀರ್ಮಾನಕ್ಕೆ ಬಂದಂತಿತ್ತು. ಈ ಕಾರಣದಿಂದಲೇ ಪ್ರೀಮಿಯರ್ ಶೋ ಮುಗಿಯುತ್ತಲೇ ಇಂಥಾದ್ದೊಂದು ಪ್ರಸ್ತಾವನೆಯನ್ನು ಅಂಜನ್ ಮುಂದಿಟ್ಟಿದ್ದರಂತೆ. ನಿಂತ ನಿಲುವಿನಲ್ಲಿಯೇ ಹಯವದನ ಒಂದೆಳೆ ಕಥೆ ಹೇಳಿದಾಕ್ಷಣವೇ ಅಂಜನ್ ನಾಗೇಂದ್ರ ಥ್ರಿಲ್ ಆಗಿ ಒಪ್ಪಿಗೆ ಸೂಚಿಸಿದ್ದರಂತೆ. ಹಾಗೆ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾ ಯಾನಕ್ಕೊಂದು ವಿದ್ಯುಕ್ತ ಚಾಲನೆ ಸಿಕ್ಕಂತಾಗಿತ್ತು. 

    DSC00077ಆ ನಂತರ ಅತ್ಯಂತ ವೇಗವಾಗಿ ರಿಹರ್ಸಲ್ಲು ನಡೆದಿತ್ತು. ಅದರಲ್ಲಿ ಅಂಜನ್ ನಾಗೇಂದ್ರ ಅತ್ಯಂತ ಉತ್ಸಾಹದಿಂದಲೇ ಭಾಗಿಯಾಗಿದ್ದರು. ಅಷ್ಟೆಲ್ಲ ಆದ ನಂತರ ಅತ್ಯಂತ ವ್ಯವಸ್ಥಿತವಾಗಿ ಈ ಚಿತ್ರದ ಚಿತ್ರೀಕರಣ ಶುರುವಾಗಿತ್ತು. ಇಲ್ಲಿ ಬೆಂಗಳೂರಿನಿಂದ ಹಿಮಾಲಯದವರೆಗೂ ಹಬ್ಬಿಕೊಂಡಿರೋ ಕಥೆ ಇರೋದರಿಂದ, ಚಿತ್ರೀಕರಣದ ಪ್ರತೀ ಘಟ್ಟದಲ್ಲೂ ಬೇರೆಯದ್ದೇ ಜಗತ್ತೊಂದು ಕಣ್ಮುಂದೆ ಪ್ರತ್ಯಕ್ಷವಾದಂಥಾ ಅನುಭೂತಿ ದಕ್ಕಲಾರಂಭಿಸಿತ್ತು. ಬೇರೆ ಬೇರೆ ಭೂಬಾಗ, ಭಿನ್ನವಾದ ಸಂಸ್ಕೃತಿಗಳನ್ನು ಮನತುಂಬಿಕೊಳ್ಳುತ್ತಾ, ಒಂದಷ್ಟು ರಿಸ್ಕು ತೆಗೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾದ ಥ್ರಿಲ್ಲಿಂಗ್ ಅನುಭವವನ್ನು ಅಂಜನ್ ನಾಗೇಂದ್ರ ತಮ್ಮದಾಗಿಸಿಕೊಂಡಿದ್ದಾರೆ.

    Snapinst.app 445135672 479300527857251 5843673562219737986 n 1080ಹೀಗೆ ಎಲ್ಲೋ ಜೋಗಪ್ಪ ನಿನ್ನರಮನೆ ಚಿತ್ರದ ನಾಯಕನಾಗಿ ನಟಿಸಿರುವ ಅಂಜನ್ ನಾಗೇಂದ್ರ ಮೂಲತಃ ಹಾಸನದವರು. ಇವರ ತಂದೆ ನಾರಾಯಣ ಆ ಕಾಲಕ್ಕೆ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದವರು. ಈ ಕಾರಣದಿಂದ ಅಂಜನ್ ಪಾಲಿಗೆ ಪುಟ್ಟ ವಯಸ್ಸಿನಲ್ಲಿಯೇ ರಂಗಭೂಮಿಯ ವಾತಾವರಣದಲ್ಲಿ ಬೆರೆಯುವ ಅವಕಾಶ ಸಿಕ್ಕಿತ್ತು. ಆ ಹಂತದಿಂದಲೇ ನಟಿಸುತ್ತಾ ಬಂದಿದ್ದ ಅವರ ಪಾಲಿಗೆ ಸಿನಿಮಾ ನಟನಾಗಬೇಕೆಂಬ ಕನಸು ಕಾಲೇಜು ದಿನಗಳವರೆಗೂ ಇರಲೇ ಇಲ್ಲವಂತೆ. ಕಡೆಗೂ ಹಾಸನದಲ್ಲಿಯೇ ಇಂಜಿನಿಯರಿಂಗ್ ಮುಗಿಸಿದ್ದ ಅಂಜನ್ ನಾಗೇಂದ್ರ ಒಂದೆರಡು ವರ್ಷ ಸಿನಿಮಾ ರಂಗದಲ್ಲಿ ನಟನಾಗಲು ಪ್ರಯತ್ನಿಸುವ ನಿರ್ಧಾರಕ್ಕೆ ಬಂದಿದ್ದರು. ಆದರೆ ಅದೇನೇ ಸರ್ಕಸ್ಸು ನಡೆಸಿದರೂ ಎರಡು ವರ್ಷಗಳಲ್ಲಿ ಯಾವ ಬೆಳವಣಿಗೆಗಳೂ ಸಾಧ್ಯವಾಗಿರಲಿಲ್ಲ.

    Snapinst.app 426293933 1731051870708615 1883855168236925137 n 1080ಆದರೆ, ಎರಡು ವರ್ಷಗಳ ನಂತರ ತಾನೇ ತಾನಾಗಿ ಕಂಬ್ಳಿಹುಳ ಚಿತ್ರದ ನಾಯಕನಾಗುವ ಅವಕಾಶ ಒಲಿದು ಬಂದಿತ್ತು. ಆ ಬಳಿಕ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾ ಅವಕಾಶವೂ ಹುಡುಕಿ ಬಂದಿತ್ತು. ಈಗ ಮತ್ತೊಂದಷ್ಟು ಅವಕಾಶಗಳೂ ಅಂಜನ್ ಮುಂದಿವೆ. ನಿಖರವಾಗಿ ಹೇಳಬೇಕೆಂದರೆ ಸಿನಿಮಾ ಕಲೆಯೆಂಬುದು ಅವರನ್ನು ಬರಸೆಳೆದು ಅಪ್ಪಿಕೊಂಡಿದೆ. ಎಲ್ಲೋ ಜೋಗಪ್ಪ ನಿನ್ನರಮನೆ ಚಿತ್ರದ ಮೂಲಕ ತನ್ನ ಮುಂದಿನ ಹಾದಿ ಮತ್ತಷ್ಟು ಸುಗಮವಾಗಲಿದೆ ಎಂಬ ಗಾಢ ನಂಬಿಕೆ ಅವರಲ್ಲಿದೆ. ಪವನ್ ಶಿಮಿಕೇರಿ ಮತ್ತು ಸಿಂಧು ಹಯವದನ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸೃಜನ್ ರಾಘವೇಂದ್ರ, ಚೇತನ್, ಹಯವದನ ಚಿತ್ರಕಥೆ, ವೇಣು ಹಸ್ರಾಳಿ ಸಂಭಾಷಣೆ, ನಟರಾಜು ಮದ್ದಾಲ ಛಾಯಾಗ್ರಹಣ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ, ಶಿವಪ್ರಸಾದ್ ಸಂಗೀತ ನಿರ್ದೇಶನವಿರುವ ಈ ಚಿತ್ರ ತೆರೆಗಾಣಲು ದಿನಗಣನೆ ಶುರುವಾಗಿದೆ.

    #anjannagendra #ellojogappaninnaramane #hayavadana bannadahejje kfi lifestory sandalwood
    Share. Facebook Twitter LinkedIn WhatsApp Telegram Email
    Previous Articleramya divya spandana: ಮೋಹಕ ತಾರೆಯ ಮುಂದಿನ ನಡೆ ನಿಗೂಢ!
    Next Article ello jogappa ninnaramane movie: ನಾಯಕಿಯ ಕಣ್ಣಲ್ಲಿ ಎಲ್ಲೋ ಜೋಗಪ್ಪ ನಿನ್ನರಮನೆ!
    Santhosh Bagilagadde

    Santhosh Bagilagadde is a name that is familiar in journalistic circles and has rendered valuable service for many significant years. Known for his vast knowledge and work in the field of cinema, crime, investigation and politics, Santhosh has worked in reputed publications like Hi Bangalore, Agni, Lankesh Patrike and Himagni.

    Related Posts

    Nishvika Naidu: ಮಾರ್ಕ್ ಮೂಲಕ ಖುಲಾಯಿಸಿತಾ ಅದೃಷ್ಟ?

    02/01/2026

    Pyaar Kannada #1 Movie: ಪ್ರೇಮಕಥನಕ್ಕೆ ಕನಸುಗಾರನ ಸಾಥ್!

    01/01/2026

    Chaithra Achar New Movie : ಭಿನ್ನ ಬಗೆಯ ಪಾತ್ರದಲ್ಲಿ ಮಿಂಚಲಣಿಯಾದ ಚೈತ್ರಾ!

    01/01/2026
    Search
    Category
    • Cinema (5)
    • OTT (4)
    • ಕಿರುತೆರೆ ಕಿಟಕಿ (5)
    • ಜಾಪಾಳ್ ಜಂಕ್ಷನ್ (37)
    • ಟೇಕಾಫ್ (10)
    • ಬಣ್ಣದ ಹೆಜ್ಜೆ (25)
    • ಬಾಲಿವುಡ್ (81)
    • ಸೌತ್ ಜೋನ್ (138)
    • ಸ್ಪಾಟ್ ಲೈಟ್ (218)
    • ಹಾಲಿವುಡ್ (2)
    • ಹೀಗಿದೆ ಈ ಪಿಚ್ಚರ್ (20)
    Recommended Host
    ಶೋಧ ನ್ಯೂಸ್ ಗೆ ಭೇಟಿ ನೀಡಿ
    Shodha News
    Top Posts

    mavalli karthik: ರಂಗಭೂಮಿ ನಟನ ಸಿನಿಮಾ-ಮಾಧ್ಯಮ ಯಾನ!

    21/11/202332 Views

    bhajarangi loki: ಅಬ್ಬರಿಸೋ ಲೋಕಿಗೆ ಸಿಕ್ಕಿದ್ದು ಎಂಥಾ ಪಾತ್ರ?

    30/05/202526 Views

    Jailer2 Movie Updates: ಆಮೀರ್ ಖಾನ್ ಕಾಮಿಡಿ ಪೀಸಾಗಿದ್ದ ಫ್ಲಾಶ್‌ಬ್ಯಾಕ್!

    05/12/202521 Views

    arjun krishna is no more: ಅದು ನಿರ್ದೇಶಕನಾಗಲೆಂದೇ ಹುಟ್ಟಿದಂತಿದ್ದ ಆಪ್ತ ಜೀವ!

    09/03/202520 Views
    Don't Miss
    ಸ್ಪಾಟ್ ಲೈಟ್ 02/01/2026

    Nishvika Naidu: ಮಾರ್ಕ್ ಮೂಲಕ ಖುಲಾಯಿಸಿತಾ ಅದೃಷ್ಟ?

    ಕೆಲ ನಟಿಯರು ಒಂದೇ ಒಂದು ಸಿನಿಮಾ ಮೂಲಕ ಸ್ಟಾರುಗಿರಿ ಪಡೆದು ಮೆರೆದುಬಿಡುತ್ತಾರೆ. ನೋಡ ನೋಡುತ್ತಲೇ ಬೇರೆ ಭಾಷೆಗಳಿಗೂ ಹಾರಿ ಮಿರಮಿರ…

    rajinikanth movie: ಮಹಿಳಾ ನಿರ್ದೇಶಕಿಯ ಕಥೆಗೆ ರಜನಿ ಒಪ್ಪಿಗೆ?

    Pyaar Kannada #1 Movie: ಪ್ರೇಮಕಥನಕ್ಕೆ ಕನಸುಗಾರನ ಸಾಥ್!

    Jananayagan Trailer : ರೀಮೇಕ್ ಸರಕು ಹೇಗಿದ್ದೀತೆಂಬ ಕೌತುಕ!

    Stay In Touch
    • Facebook
    • Instagram
    • YouTube
    • WhatsApp
    Tags
    #actress (18) #alluarjun (8) #bilichukkihallihakki (8) #bilichukkihallihakkimovie (6) #gunsandrosesmovie) (6) #kannadamovie (11) #kiccha (6) #maheshgowda (7) #pavithragowda (8) #renukaswamymurdercase (10) 'santhoshbagilagadde (7) bahubali (8) bannadahejje (17) biggbosskannada (6) bollywood (74) challengingstardarshan (10) cinishodha (139) cinishodhareview (16) coolie (6) crime (8) darshan (18) jailer (8) kanthara (7) kerebete_gowrishankar_titlesong_kfi_byvijayendra_shivamogga_sandalwood_kfi_cinishodha (10) kfi (170) kgf (8) kicchasudeep (11) kicchasudeepa (6) krishnegowda (6) lifestory (19) mollywood (10) pawankalyan (8) pinkielli (5) prabhas (19) prashanthneel (7) rajani (6) rajanikanth (12) rashmikamandanna (9) ravike_prasanga_kannadamovie_geethabharathibhat_santhoshkodenkeri_kfi_sandalwood_cinishodha (7) rip (6) rukminivasanth (7) sandalwood (198) shivarajkumar (9) tollywood (60) yash (11)
    ನಮ್ಮ ಬಗ್ಗೆ

    ಈ ನಾಡಿನಲ್ಲಿ ಹೆಸರಾಗಿರುವ ಹಾಯ್ ಬೆಂಗಳೂರ್, ಅಗ್ನಿ, ಲಂಕೇಶ್ ಪತ್ರಿಕೆ, ಹಿಮಾಗ್ನಿ ಮಂತಾದ ಅನೇಕ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿ, ತಮ್ಮದೇ ಆದ ಛಾಪು ಮೂಡಿಸಿರುವವರು ಪತ್ರಕರ್ತ ಸಂತೋಷ್ ಬಾಗಿಲಗದ್ದೆ. ರಾಜಕೀಯ, ಅಪರಾಧ, ಸಿನಿಮಾ ಸೇರಿದಂತೆ ತನಿಖಾ ಪತ್ರಿಕೋದ್ಯಮದಲ್ಲಿ ದಶಕಗಳಿಗೂ ಹೆಚ್ಚು ಕಾಲ ಪಳಗಿಕೊಂಡು, ಅನೇಕ ಭ್ರಷ್ಟರನ್ನು ಬಯಲಾಗಿಸಿರುವ ಬಾಗಿಲಗದ್ದೆ ಆರಂಭಿಸಿರುವ ವಿಭಿನ್ನ ಡಿಜಿಟಲ್ ಹೆಜ್ಜೆ ಶೋಧ ಮತ್ತು ಸಿನಿ ಶೋಧ. ಇದು ಹೊಸಾ ಆಯಾಮದ ಪತ್ರಿಕೋದ್ಯಮ. ಸತ್ಯದ ಭೂಮಿಕೆಯ ನೇರ-ನಿಷ್ಠುರ ವರದಿಗಳ ಸಂಕಲ್ಪದೊಂದಿಗೆ, ಭಿನ್ನ ಶೈಲಿಯ ಬರವಣಿಗೆಯ ಮೂಲಕ ಹೊಸತೊಂದು ಜಗತ್ತು ನಿಮ್ಮೆದುರು ನಿರಂತವಾಗಿ ತೆರೆದುಕೊಳ್ಳಲಿದೆ; ಅಚ್ಚರಿಗೀಡುಮಾಡಲಿದೆ!
    ಅಂದಹಾಗೆ, ಇಲ್ಲಿ ಪ್ರಕಟವಾಗೋ ಯಾವುದೇ ಬರಹಗಳನ್ನು ಯಾರೂ ಭಟ್ಟಿ ಇಳಿಸುವಂತಿಲ್ಲ. ಅಂಥಾ ಕಳವು ವೃತ್ತಾಂತ ಗಮನಕ್ಕೆ ಬಂದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.

    All Rights Reserved by dreamwings media
    Email: dreamwingsmedia@gmail.com

    Facebook X (Twitter) YouTube WhatsApp
    Most Popular

    jeevasakhi: ಕಿರುಚಿತ್ರದೊಂದಿಗೆ ಪರೀಕ್ಷೆಗೊಡ್ಡಿಕೊಂಡ ಸಂಗಮೇಶ್ ಪಾಟೀಲ್!

    01/06/20230 Views

    samantha ruth prabhu: ನೋವಿನ ಬಳಿಕ ಕಣ್ತೆರೆಯಿತು ನಲಿವಿನ ಪರ್ವ!

    02/06/20230 Views

    pinki elli review: ಅಬ್ಬರವಿಲ್ಲದೆ ಆದ್ರ್ರಗೊಳಿಸುವ ಅಪರೂಪದ ಚಿತ್ರ!

    03/06/20230 Views
    Copyrights © 2022 - 26, All Rights Reserved by Cini Shodha | Developed by: DIGICUBE SOLUTIONS |
    Follow us on

    Type above and press Enter to search. Press Esc to cancel.